- Advertisement -
- Advertisement -
ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 73ರಲ್ಲಿ, ದಿನದ 24 ಗಂಟೆಯೂ ಕೆ.ಎಸ್.ಆರ್. ಟಿ.ಸಿ. ಬಸ್ ಸಂಚರಿಸಲು ಚಿಕ್ಕಮಗಳೂರು ದಂಡಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆ. ಎಸ್. ಆರ್.ಟಿ. ಸಿ ಬಸ್ ಗಳು ಹಾಗು ಆರು ಚಕ್ರದ ಲಾರಿಗಳನ್ನೊಳಗೊಂಡಂತೆ ಎಲ್ಲಾ ವಿಧದ ಲಘು ವಾಣಿಜ್ಯ ವಾಹನಗಳ ಸಂಚಾರಕ್ಕೆ ದಿನದ 24 ಗಂಟೆಯೂ ಮುಕ್ತಗೊಳಿಸುವಂತೆ ಹೇಳಿದ್ದಾರೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಹಲವು ವಿದ್ಯಾರ್ಥಿಗಳು ಸಂಚರಿಸುತ್ತಿರುವುದಲ್ಲದೆ, ಚಿಕಿತ್ಸೆಗಾಗಿ ರೋಗಿಗಳು ಸಹ ವಾಹನಗಳಲ್ಲಿ ತರಳಬೇಕಾಗಿರುತ್ತದೆ. ಈ ಎಲ್ಲಾ ಅಂಶಗಳನ್ನು ಮನಗಂಡು ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೋಗಿಗಳ ಹಿತದೃಷ್ಠಿಯಿಂದ ವಾಹನ ಸಂಚಾರ ಮಾಡುವಂತೆ ಮನವಿ ಮಾಡಿದ್ದಾರೆ.
- Advertisement -