Saturday, June 13, 2026
Homeತಾಜಾ ಸುದ್ದಿಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಗೀತಾ ಶಿವರಾಜ್ ಕುಮಾರ್

ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಗೀತಾ ಶಿವರಾಜ್ ಕುಮಾರ್

- Advertisement -
- Advertisement -

ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಪತ್ನಿ, ಗೀತಾ ಶಿವರಾಜ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.  ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗೀತಾ ಕೈ ಪಡೆ ಸೇರಿದ್ರು.

 ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಹೋದರ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಇದ್ದರು.

ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ ಅವರು 2014 ರಲ್ಲಿ ಜೆಡಿಎಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಈ ವೇಳೆ ಜೆಡಿಎಸ್ ನಲ್ಲಿ ಜೊತೆಗೆ ಸಹೋದರ ಮಧುಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬದಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಇಂದು ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾಳೆಯಿಂದ ಸೊರಬದಲ್ಲಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ.

- Advertisement -

Latest News

error: Content is protected !!