Saturday, June 29, 2024
Homeತಾಜಾ ಸುದ್ದಿಗೀತಾ ಶಿವರಾಜ್‌ಕುಮಾರ್‌- ಮಧು ಬಂಗಾರಪ್ಪ ವಿರುದ್ಧ ಎಫ್ ಬಿಯಲ್ಲಿ ಕುಮಾರ್‌ ಆಕ್ರೋಶ

ಗೀತಾ ಶಿವರಾಜ್‌ಕುಮಾರ್‌- ಮಧು ಬಂಗಾರಪ್ಪ ವಿರುದ್ಧ ಎಫ್ ಬಿಯಲ್ಲಿ ಕುಮಾರ್‌ ಆಕ್ರೋಶ

spot_img
- Advertisement -
- Advertisement -

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಕಾಂಗ್ರೆಸ್‌ ಅಭ್ಯರ್ಥಿ ಗೀತಾ, ನಟ ಶಿವರಾಜ್‌ಕುಮಾರ್‌, ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್‌ಬುಕ್‌ನಲ್ಲಿ ಸುದೀರ್ಘ‌ ಪೋಸ್ಟ್‌ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

“ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದು ಪಡೆದು ಬದುಕಿದ ಸಾರೆಕೊಪ್ಪ ಬಂಗಾರಪ್ಪ ಅವರನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗೆ ಬಳಸಿಕೊಂಡಿದ್ದು, ಅವರನ್ನು ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತತೆ. ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿ ಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ!,” ಎಂದಿದ್ದಾರೆ.

ವರನಟ ಡಾ. ರಾಜ್‌ಕುಮಾರ್‌ ಅವರ ಹೆಸರನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳ ಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!