Wednesday, May 8, 2024
Homeತಾಜಾ ಸುದ್ದಿಕೋವಿಡ್ ಲಸಿಕೆಯನ್ನು ಪಡೆಯುವುದು ಕಡ್ಡಾಗೊಳಿಸಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಕೋವಿಡ್ ಲಸಿಕೆಯನ್ನು ಪಡೆಯುವುದು ಕಡ್ಡಾಗೊಳಿಸಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

spot_img
- Advertisement -
- Advertisement -

ಹೊಸದಿಲ್ಲಿ: ಕೋವಿಡ್ ಲಸಿಕೆಯನ್ನು ಪಡೆಯುವುದು ಕಡ್ಡಾಗೊಳಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಇಂದು ಕೇಂದ್ರ ಸರ್ಕಾರ ತಿಳಿಸಿದೆ.

“ಕೋವಿಡ್-19 ವ್ಯಾಕ್ಸಿನೇಷನ್ ಪ್ರಸ್ತುತ ನಡೆಯುತ್ತಿರುವ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ದೊಡ್ಡ ಸಾರ್ವಜನಿಕ ಹಿತಾಸಕ್ತಿಯಾಗಿದೆ. ಎಲ್ಲಾ ನಾಗರಿಕರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ವಿವಿಧ ಮಾಧ್ಯಮಗಳ ಮೂಲಕ ಸರಿಯಾಗಿ ಜಾಹೀರಾತು, ಸಲಹೆ ಮತ್ತು ಸಂವಹನ ನಡೆಸಲಾಗಿದೆ” ಎಂದು ಕೇಂದ್ರ ಹೇಳಿದೆ.

ಆದರೆ ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಕೋವಿಡ್ ಲಸಿಕೆ ಹಾಕಲಾಗುತ್ತಿಲ್ಲ. ಲಸಿಕೆ ಪಡೆಯುತ್ತಿರುವ ವ್ಯಕ್ತಿಯ ಪೂರ್ವಾನುಮತಿಯಿಲ್ಲದೆ ಲಸಿಕೆ ನೀಡುತ್ತಿಲ್ಲ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ.

ವಿಕಲಾಂಗ ವ್ಯಕ್ತಿಗಳಿಗೆ ಮನೆ ಮನೆಗೆ ತೆರಳಿ ಕೋವಿಡ್-19 ಲಸಿಕೆ ನೀಡುವ ಬಗ್ಗೆ ಎನ್‌ಜಿಒ ಎವಾರಾ ಫೌಂಡೇಶನ್‌ ನ ಅರ್ಜಿಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೇಂದ್ರವು ಈ ಮಾಹಿತಿ ನೀಡಿದೆ.

- Advertisement -
spot_img

Latest News

error: Content is protected !!