Thursday, June 4, 2026
Homeತಾಜಾ ಸುದ್ದಿʻಗೃಹಲಕ್ಷ್ಮಿʼ ಯೋಜನೆ ಹಣ 8 ದಿನಗಳಲ್ಲಿ ಬಿಡುಗಡೆ

ʻಗೃಹಲಕ್ಷ್ಮಿʼ ಯೋಜನೆ ಹಣ 8 ದಿನಗಳಲ್ಲಿ ಬಿಡುಗಡೆ

- Advertisement -
- Advertisement -

ಬೆಳಗಾವಿ: ಕಾಂಗ್ರೆಸ್ ಸರಕಾರವು ಮಹಿಳೆಯರಿಗೆ ನೀಡುವ ʻಗೃಹಲಕ್ಷ್ಮಿʼ ಯೋಜನೆಯ ಹಣದ ಬಾಕಿ ಮೊತ್ತವನ್ನು ಇನ್ನೂ 8 ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಅವರು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ‘ಮಹಿಳೆಯರಿಗೆ ಸಿಗುವಂತಹ ಗೃಹಲಕ್ಷ್ಮಿ ಹಣ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಾಕಿ ಮೊತ್ತವು 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದು, ಈಗಾಗಲೇ ಗಡುವಿನಲ್ಲಿ 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇನ್ನು ಗೃಹಲಕ್ಷ್ಮಿ ಕುರಿತಂತೆ ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ ಎಂದರು.

- Advertisement -

Latest News

error: Content is protected !!