ಉಡುಪಿ: ಭೀಮಾ ಜ್ಯುವೆಲರ್ಸ್ ತಮ್ಮ ಸಿಎಸ್‌ಆರ್ ನಿಧಿ ಯೋಜನೆ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಮಹೇಂದ್ರ ಕಂಪನಿಯ ಬೊಲೆರೋ ಜೀಪನ್ನು ಕೊಡುಗೆಯಾಗಿ ನೀಡಿದೆ.
ಈ ವಾಹನವನ್ನು ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ಕಾರ್ಯಾಚರಣೆಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಹಸ್ತಾಂತರಿಸಲಾಗಿದೆ.
ಭೀಮಾ ಜ್ಯುವೆಲರ್ಸ್ ಉಡುಪಿ ಇದರ ಸೇಲ್ಸ್ ಮತ್ತು ಆಪರೇಷನ್ಸ್ ಮುಖ್ಯಸ್ಥರಾದ ಗುರುಪ್ರಸಾದ್ ಅವರು ಜನವರಿ 1ರಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರಿಗೆ ಜೀಪಿನ ಕೀಯನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ, ಉಡುಪಿ ಉಪವಿಭಾಗದ ಡಿವೈಎಸ್‌ಪಿ ಪ್ರಭು ಡಿ.ಟಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರವಿಕುಮಾರ್ ಹಾಗೂ ಪೊಲೀಸ್ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಭೀಮಾ ಜ್ಯುವೆಲರ್ಸ್ ಉಡುಪಿ ಇದರ ಶಾಖಾ ಮ್ಯಾನೇಜರ್ ಆಶಿಶ್, ಡೆಪ್ಯುಟಿ ಮ್ಯಾನೇಜರ್ ಸುಧೀರ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಪ್ರಸನ್ನ ಕುಮಾರ್, ಮಾರ್ಕೆಟಿಂಗ್ ಡಿಪಾರ್ಟ್ಮೆಂಟ್‌ನ ಮಂಜುನಾಥ್ ಅಮೀನ್, ಸೇಲ್ಸ್ ಮತ್ತು ಆಪರೇಷನ್ಸ್ ಹೆಡ್ ರಾಘವೇಂದ್ರ ಭಟ್ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.


