- Advertisement -
- Advertisement -
ಬೆಂಗಳೂರು; ಹಿರಿಯ ಹಾಸ್ಯನಟ ದಿವಂಗತ ದಿನೇಶ್ ಅವರ ಮಗ ದರ್ಶನ ಅಭಿನಯದ ನವಗ್ರಹ ಚಿತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಗಿರಿ ದಿನೇಶ್ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು.
- Advertisement -