ಧರ್ಮಸ್ಥಳ ಸೌಜನ್ಯ ಪ್ರಕರಣದ ಎಸ್‌ಐಟಿ ತಂಡ ಬದಲಾವಣೆಗೆ ಆಗ್ರಹ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಸ್ಪಷ್ಟನೆ ನೀಡಿದ್ದಾರೆ. ಎಸ್‌ಐಟಿ ತಂಡದಲ್ಲಿರುವ ಶಶಿಕುಮಾರ್ ಅವರ ವಿರುದ್ಧ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಅವರು ಹೇಳಿದ್ದಾರೆ.
ಶಶಿಕುಮಾರ್ ಅವರ ತನಿಖಾ ಪಾತ್ರದ ಬಗ್ಗೆ ಜನರಿಂದಲೇ ದೂರುಗಳು ಹಾಗೂ ಅಪಸ್ವರಗಳು ಕೇಳಿಬಂದಿವೆ. ಪ್ರಕರಣದ ತನಿಖೆಯನ್ನು ಯಾರೇ ನಡೆಸಿದರೂ ತಮ್ಮ ಆಕ್ಷೇಪವಿಲ್ಲ. ಸಾಮಾನ್ಯ ಪೊಲೀಸ್ ಕಾನ್‌ಸ್ಟೇಬಲ್ ತನಿಖೆ ನಡೆಸಿದರೂ ತಮಗೆ ಯಾವುದೇ ತಕರಾರಿಲ್ಲ ಎಂದು ಮಟ್ಟಣ್ಣನವರ್ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆಯ ಪ್ರಕ್ರಿಯೆ ಹಾಗೂ ಅದರ ಹೊಣೆಗಾರಿಕೆಯ ಕುರಿತು ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಎದ್ದಿರುವ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಸ್ಪಷ್ಟ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


