- Advertisement -
- Advertisement -
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟ ಯುವತಿ.
ಪ್ರಿಯಾಂಕ 8 ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದಳು. ನ.5ರಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು. ನ.5ರಂದು ಪ್ರಾಂಶುಪಾಲರು ಕಾಲೇಜಿಗೆ ರಜೆ ಘೋಷಿಸಿದ್ದಾರೆ .
- Advertisement -