Thursday, June 4, 2026
Homeಕರಾವಳಿಕಡಬದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಕಡಬದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

- Advertisement -
- Advertisement -

ಕಡಬ: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಇಂದು  ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಎಂದು ಗುರುತಿಸಲಾಗಿದೆ. ತನ್ನ ಮನೆ ಸಮೀಪ ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕಡಬದ ಬೈಕ್ ಶೋರೂಂ ಒಂದರಲ್ಲಿ ದೀಕ್ಷಾ ಕೆಲಸ ನಿರ್ವಹಿಸುತ್ತಿದ್ದಳು. ಇನ್ನು ಆತ್ಮಹತ್ಯಗೆ ಕಾರಣ ಏನೂ ಅನ್ನೋದು ಖಚಿತವಾಗಿ ತಿಳಿದು ಬಂದಿಲ್ಲ.  ವೈಯಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!