Thursday, June 4, 2026
Homeಕರಾವಳಿಮಂಗಳೂರು; ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು; ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು; ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಜೈಯ ಅಪಾರ್ಟ್ ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ದಂಪತಿ ಪುತ್ರಿಯಾಗಿರುವ ಈಕೆ ನಗರದ ಕಾಲೇಜ್ ಒಂದರಲ್ಲಿ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.ನಿನ್ನೆ ರಾತ್ರಿ ತಾಯಿ ಅಪಾರ್ಟ್‌ ಗಳ ಕಸ ಸಂಗ್ರಹಿಸಲು ತೆರಳಿದ್ದಾಗ ರೂಮ್ ನಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ ಬಾಗಿಲು ಲಾಕ್ ಮಾಡಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕೊಂಡಿದ್ದಾಳೆ.

ಕಸ ಬಿಸಾಡಿ ವಾಪಸ್ ಬಂದಾಗ ರೂಂ ಬಾಗಿಲು ಲಾಕ್ ಆಗಿದ್ದು ಎಷ್ಟೇ ಬಡಿದರೂ ಬಾಗಿಲು ತೆರೆಯದನ್ನು ನೋಡಿ ಕಿಟಿಕಿಯಿಂದ ಗಮನಿಸಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ. ಕೂಡಲೇ ಅಪಾರ್ಟ್ ಮೆಂಟ್ ನವರು ಬಾಗಿಲು ಒಡೆದು ಕುಣಿಕೆಯಿಂದ ಕೆಳಗಿಸಿ ಉಪಚರಿಸಿದರೂ ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು.

ಪರೀಕ್ಷೆಯಲ್ಲಿ ಫೇಲ್ ಆಗಿದ್ದೇ ನೊಂದು ಈ ಕೃತ್ಯ ಮಾಡಿದ್ದಾಳೆ ಎಂದು ವಿದ್ಯಾರ್ಥಿನಿಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!