Thursday, June 4, 2026
Homeತಾಜಾ ಸುದ್ದಿಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಫ್ಯಾನಿಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಎಂಬಲ್ಲಿ ನಡೆದಿದೆ. ಉಮೇಶ್ ಗೌಡ ರವರ ಪುತ್ರಿ ವಿದ್ಯಾ (22) ಮೃತ ಯುವತಿ. ವಿದ್ಯಾ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿದ್ಯಾ ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ವಿದ್ಯಾ ತಾಯಿ ಸುನಂದ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!