- Advertisement -
- Advertisement -
ಉಡುಪಿ : ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ಪಡುತೋನ್ಸೆ ಗ್ರಾಮದ ಪಡುಕುದ್ರು ಎಂಬಲ್ಲಿ ನಡೆದಿದೆ. ಪ್ರತಿಮಾ (30) ಮೃತ ಯುವತಿ.
ಇತ್ತೀಚೆಗೆ ಕೆಲವು ತಿಂಗಳ ಹಿಂದೆ ಪಡುಕುದ್ರು ಅಂಗನವಾಡಿ ಕಾರ್ಯಕರ್ತೆಯಾಗಿ ಆಯ್ಕೆಯಾಗಿದ್ದ ಪ್ರತಿಮಾ ಒಂದೆರಡು ತಿಂಗಳ ಹಿಂದೆ ಆ ಕೆಲಸಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -