Tuesday, June 30, 2026
Homeಕರಾವಳಿಉಪ್ಪಿನಂಗಡಿ:ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಪ್ಪಿನಂಗಡಿ:ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಉಪ್ಪಿನಂಗಡಿ:ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ  ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ  ನಡೆದಿದೆ.

ಕರಾಯ ಗ್ರಾಮದ ಕೃಷಿಕರೊಬ್ಬರ ಮನೆಯಲ್ಲಿ ಕೃಷಿ ಕೂಲಿಗಾಗಿ ಬಂದಿದ್ದ ದಂಪತಿಯ ಪುತ್ರಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಬಾಲಕಿ ತೋಟದಲ್ಲಿದ್ದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಾರದ ಹಿಂದಷ್ಟೇ ಕುಟುಂಬ ಕೆಲಸಕ್ಕಾಗಿ ಆಗಮಿಸಿತ್ತು ಎನ್ನಲಾಗಿದೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!