Saturday, June 27, 2026
Homeಕರಾವಳಿಉಡುಪಿಉಡುಪಿ; ಮದುವೆ ಸಮಾರಂಭಕ್ಕೆ ತೆರಳಿದ್ದ ಯುವತಿ ಕುಸಿದು ಬಿದ್ದು ಸಾವು

ಉಡುಪಿ; ಮದುವೆ ಸಮಾರಂಭಕ್ಕೆ ತೆರಳಿದ್ದ ಯುವತಿ ಕುಸಿದು ಬಿದ್ದು ಸಾವು

- Advertisement -
- Advertisement -

ಉಡುಪಿ : ರೋಸ್ ಸಮಾರಂಭ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ)ಕ್ಕೆ ತೆರಳಿದ್ದ ಯುವತಿ  ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.   ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಮೃತ ದುರ್ದೈವಿ.

ಜೋಸ್ನಾ ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು.ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ

- Advertisement -

Latest News

error: Content is protected !!