- Advertisement -
- Advertisement -
ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಏಳನೇ ತರಗತಿ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಆರಿಗೊ ನಿವಾಸಿ ರಿತೀಕ್ಷಾ(13) ಮೃತ ಬಾಲಕಿ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆ.3ರಂದು ನಸುಕಿನ ಜಾವ ಕೊನೆಯುಸಿರೆಳೆದಿದ್ದಾಳೆ.
ಚಿಕ್ಕಮುಡ್ನೂರು ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ರಿತೀಕ್ಷಾರವರ ಅಕಾಲಿಕ ನಿಧನಕ್ಕೆ ಶಿಕ್ಷಕರು, ಸ್ನೇಹಿತರು ಹಾಗೂ ಹಿತೈಷಿಗಳು ಕಂಬನಿ ಮಿಡಿದಿದ್ದಾರೆ. ರಿತೀಕ್ಷಾ ನಿಧನದ ಹಿನ್ನೆಲೆಯಲ್ಲಿ ಇಂದು ಶಾಲೆಯಲ್ಲಿ ನುಡಿನಮನ ಸಲ್ಲಿಸಿ ಶಾಲೆಗೆ ರಜೆ ನೀಡಲಾಗಿತ್ತು.
ಮೃತ ಬಾಲಕಿ ತಂದೆ ರಾಜೇಶ್, ತಾಯಿ ಶೋಭಾ, ಸಹೋದರ ಹಾಗೂ ಬಂಧು ಬಳಗವನ್ನು ಅಗಲಿದ್ದಾಳೆ.
- Advertisement -