Monday, May 6, 2024
Homeಕರಾವಳಿಮಂಗಳೂರು: ಫ್ಲ್ಯಾಟ್ ನ ಮೂರನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಮಂಗಳೂರು: ಫ್ಲ್ಯಾಟ್ ನ ಮೂರನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

spot_img
- Advertisement -
- Advertisement -

ಮಂಗಳೂರು: ಫ್ಲ್ಯಾಟ್ ನ ಮೂರನೇ ಮಹಡಿಯಿಂದ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಕಂಕನಾಡಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಮುಹಮ್ಮದ್ ಇಮ್ತಿಯಾಝ್ ಎಂಬವರ ಪುತ್ರಿ ಸೆಹರಾ ಇಮ್ತಿಯಾಝ್ (15) ಮೃತ ಬಾಲಕಿ.

ನಗರದ ಲೂರ್ಡ್ಸ್ ಶಾಲೆಯಲ್ಲಿ ಎಸ್ಸೆಸೆಲ್ಸಿ ಓದುತ್ತಿದ್ದ ಈಕೆ ಬುಧವಾರ ಸಂಜೆ ಸುಮಾರು 4:30ಕ್ಕೆ ಮನೆಯಲ್ಲಿ ಕಿಟಕಿಯ ಕರ್ಟನ್ ಸರಿಪಡಿಸುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಈಕೆಯನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5:40ಕ್ಕೆ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!