Thursday, June 4, 2026
Homeಕರಾವಳಿಮಂಗಳೂರಿಗೆ ತೆರಳುತ್ತಿದ್ದಾಗ ರೈಲಿನಿಂದ ಬಿದ್ದು ಯುವತಿ ಸಾವು

ಮಂಗಳೂರಿಗೆ ತೆರಳುತ್ತಿದ್ದಾಗ ರೈಲಿನಿಂದ ಬಿದ್ದು ಯುವತಿ ಸಾವು

- Advertisement -
- Advertisement -

ಕಾಸರಗೋಡು; ಮಂಗಳೂರಿಗೆ ತೆರಳುತ್ತಿದ್ದಾಗ ನೇತ್ರಾವತಿ ರೈಲಿನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಪಳ್ಳಿ ಕೆರೆ ಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30)  ಎಂಬ ಯುವತಿ  ನೇತ್ರಾವತಿ ರೈಲಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ರೈಲಿನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಪಳ್ಳಿಕೆರೆ ಮಾಸ್ತಿ ಗುಡ್ಡೆ ಯ ರೈಲ್ವೆ ಹಳಿ ಸಮೀಪ ಆಕೆಯ ಮೃತ ದೇಹಪತ್ತೆ ಯಾಗಿದೆ.

ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.  ಮೃತ ದೇಹದ ಬಳಿ ಲಭಿಸಿದ ಪರ್ಸ್ ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಗಿದೆ.ಕೋಜಿಕ್ಕೊಡ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ.

- Advertisement -

Latest News

error: Content is protected !!