Friday, June 5, 2026
Homeಕರಾವಳಿಉಡುಪಿಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ‌ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಪೊಲೀಸರು

ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ‌ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಡುಪಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬೈಂದೂರಿನ ಉಪ್ಪುಂದ ಮೂಲದ ಯುವಕ ಸಚಿನ್ ಖಾರ್ವಿ (23) ಬಂಧಿತ ಆರೋಪಿ. ಈತ 17 ವರ್ಷದ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ಇಬ್ಬರು ಪರಸ್ಪರ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.

ಆ.18ರಂದು ರಾತ್ರಿ ಬಾಲಕಿಯ ತಾಯಿ ಅಡುಗೆ ಮನೆಯಲ್ಲಿದ್ದ ವೇಳೆ ಮನೆಗೆ ಬಂದ ಆರೋಪಿ ಸಚಿನ್ ಖಾರ್ವಿ ಸಂತ್ರಸ್ತೆಯನ್ನು ಅಪಹರಿಸಿಕೊಂಡು ಹೋಗಿ, ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ದೂರಲಾಗಿದೆ. ಬಳಿಕ ಆತ ಜಿರಲೆಗೆ ಹಾಕುವ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡ ಈತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!