Sunday, May 5, 2024
Homeಕರಾವಳಿಉಡುಪಿಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆ; ಹಣಕ್ಕಾಗಿ ಯುವತಿಯ ಅಪಹರಣ

ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆ; ಹಣಕ್ಕಾಗಿ ಯುವತಿಯ ಅಪಹರಣ

spot_img
- Advertisement -
- Advertisement -

ಶಿವಮೊಗ್ಗ : ಹಣಕ್ಕಾಗಿ ಯುವತಿಯನ್ನು ಅಪಹರಣ ಮಾಡಿರುವ ಘಟನೆ  ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ರಂಜಿತಾ (22) ಅಪಹರಣಗೊಂಡ ಯುವತಿ. ಈಕೆಯನ್ನು ಮೇ 14 ರಂದು ಸಂಜೆ 5 ಗಂಟೆಯಿಂದ ರಾತ್ರಿ 9.30ರ ಅವಧಿಯಲ್ಲಿ ಹಣಕ್ಕಾಗಿ ದುಷ್ಕರ್ಮಿಗಳು ಅಪಹರಣ ಮಾಡಿರುವುದಾಗಿ ದೂರು ದಾಖಲಾಗಿದೆ.

ಯುವತಿಯು ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 18182-261400, 261413,261416  ಈ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!