Sunday, May 5, 2024
Homeಕರಾವಳಿಬಂಟ್ವಾಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಮದುವೆ ನಿಗದಿಯಾಗಿದ್ದಾಕೆಗೆ ಗಂಭೀರ ಗಾಯ

ಬಂಟ್ವಾಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಮದುವೆ ನಿಗದಿಯಾಗಿದ್ದಾಕೆಗೆ ಗಂಭೀರ ಗಾಯ

spot_img
- Advertisement -
- Advertisement -

ಬಂಟ್ವಾಳ: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿಯಾಗಿ ಆಕೆ ಗಂಭೀರ ಗಾಯಗೊಂಡ ಘಟನೆ ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ನಿನ್ನೆ ರಾತ್ರಿ 9 ಗಂಟೆ ವೇಳೆ ನಡೆದಿದೆ.ಚೈತ್ರಾ (22 ) ಗಾಯಗೊಂಡ ಯುವತಿ.

ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರಾ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ.ಈ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಪ್ಟ್ ಕಾರು ಇವಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಇದೇ ಸಂದರ್ಭದಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ‌ ಎ.ಎಸ್ಐ.ಸುರೇಶ್ ಪಡಾರ್, ಹೆಚ್.ಸಿ.ರಮೇಶ್   ಅವರ ಖಾಸಗಿ ವಾಹನದ ಮೂಲಕ ಗಾಯಳು ಚೈತ್ರಾಳನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ಈಕೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.


ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ನಿಂತಿದೆ.
ಕಾರು ಚಾಲಕ ಹಾಗೂ ಹಾಗೂ ಇವನ ಜೊತೆ ಇದ್ದ ಸಹಪ್ರಯಾಣಿಕ ಪರಾರಿಯಾಗಿದ್ದಾರೆ.ಗಾಂಜಾ ಸೇವನೆ ಮಾಡಿ ಕಾರು ಚಾಲನೆ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಲ್ಲದೆ,ಕಾರಿನ ಡಯಾಸ್ ನೊಳಗೆ ಗಾಂಜಾ ಸಿಕ್ಕಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಮೆಲ್ಕಾರ್ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ‌ಭೇಟಿ ನೀಡಿದ್ದು,ಪರಿಶೀಲನೆ ನಡೆಸುತ್ತಿದ್ದಾರೆ.ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!