Thursday, June 4, 2026
Homeಕರಾವಳಿಉಡುಪಿಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್ ಪೋಸ್ಟರ್

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್ ಪೋಸ್ಟರ್

- Advertisement -
- Advertisement -

ಉಡುಪಿ: ಲೋಕಸಭಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾರ್ಯಕರ್ತರು, ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್‌ ಅಭಿಯಾನ ನಡೆಸಲು ಮುಂದಾಗಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿರುವ ಕಾಂಗ್ರೆಸ್ ಕಾರ್ಯಕರ್ತರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಕಾಂಗ್ರೆಸ್ ಕಾರ್ಯಕರ್ತರ ಗೋ ಬ್ಯಾಕ್ ಪೋಸ್ಟರ್ ಗಳು ಹರಿದಾಡಿವೆ

- Advertisement -

Latest News

error: Content is protected !!