Saturday, June 6, 2026
Homeಕರಾವಳಿಉಡುಪಿಮಲ್ಪೆ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲು

ಮಲ್ಪೆ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲು

- Advertisement -
- Advertisement -

ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾದ ಘಟನೆ ಇವತ್ತು ಸಂಭವಿಸಿದೆ.

ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು,ನೀರಿಗಿಳಿದಿದ್ದರು. 68 ವಿದ್ಯಾರ್ಥಿಗಳು ತಂಡದಲ್ಲಿ ಆಗಮಿಸಿದ್ದರು. ಈ ಸಂದರ್ಭ ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಸದ್ಯ ಓರ್ವನ ಶವವನ್ನು  ಲೈಫ್ ಗಾರ್ಡ್ ಸಿಬ್ಬಂದಿಗಳು ಮೇಲಕ್ಕೆತ್ತಿದ್ದಾರೆ. ನೀರುಪಾಲದ ಮತ್ತೊಬ್ಬ ಯುವಕನಿಗೆ ಶೋಧ ಮುಂದುವರೆದಿದೆ. ಅಂದಹಾಗೆ ಎರಡು ವಾರ ಮುನ್ನ ಇಲ್ಲಿ ಕೇರಳದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದರು.

- Advertisement -

Latest News

error: Content is protected !!