- Advertisement -
- Advertisement -
ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪದವಿ ಪ್ರದಾನ ಭಾಷಣ ಮಾಡುವರು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ.ಕೆ. ರಮೇಶ್ ಶುಭಾಶಂಸನೆ ಮಾಡುವರು.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಇಂದು ಮಂಗಳೂರು ವಿಮಾನ ನಿಲ್ದಾಣದಿಂದ ಧರ್ಮಸ್ಥಳ ಸನ್ನಿಧಿ ವಸತಿ ಗೃಹಕ್ಕೆ ರಾತ್ರಿ 10:15 ಕ್ಕೆ ಅಗಮಿಸಿದ್ದು ಅಧಿಕಾರಿಗಳು ಸ್ವಾಗತಿಸಿಕೊಂಡರು
- Advertisement -