Thursday, June 4, 2026
Homeಕರಾವಳಿಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಗೋವಾ ಸಿಎಂ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಗೋವಾ ಸಿಎಂ

- Advertisement -
- Advertisement -

ಧರ್ಮಸ್ಥಳ: ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಮೋದ್ ಸಾವಂತ್, ಕೆಲವು ಹೊತ್ತು ಮಾತುಕತೆ ನಡೆಸಿದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ವೇಳೆ ಗೋವಾ ಸಿಎಂ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸ್ವಾಗತಿಸಿದರು.

ಬಳಿಕ ಶಾಂತಿವನದ ಎಸ್ ಡಿಎಂ‌ ಯೋಗ ಮತ್ತು ನ್ಯಾಚುರೋಪತಿ ಕೇಂದ್ರಕ್ಕೆ ಭೇಟಿ ನೀಡಿದ ಗೋವಾ ಸಿಎಂ, ಶಾಂತಿವನದ ಚಿಕಿತ್ಸಾ ವ್ಯವಸ್ಥೆ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

- Advertisement -

Latest News

error: Content is protected !!