Saturday, June 27, 2026
Homeಕರಾವಳಿಉಡುಪಿಉಡುಪಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ

ಉಡುಪಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ

- Advertisement -
- Advertisement -

ಉಡುಪಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಡುಪಿ ಭೇಟಿ ನೀಡಿದ್ದಾರೆ. ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಪ್ರಮೋದ್ ಸಾವಂತ್,‌ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.

ಇದೇ ವೇಳೆ, ಗೋವಾ ಸಿಎಂಗೆ ಪರ್ಯಾಯ ಕೃಷ್ಣಾಪುರ ಮಠದಿಂದ ಗೌರವ ಸಮರ್ಪಣೆ ಮಾಡಲಾಯಿತು. ಉಡುಪಿ ಭೇಟಿ ವೇಳೆ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಜೋಡೋ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರಮೋದ್ ಸಾವಂತ್, ಈ ಪಾದಯಾತ್ರೆಯನ್ನು 1947ರಲ್ಲಿ ಮಾಡಬೇಕಿತ್ತು, ಅಂದು ಭಾರತ್ ಜೋಡೋ ಮಾಡಿದ್ದರೆ ಗೋವಾ ವಿಮೋಚನೆ ತಡವಾಗುತ್ತಿರಲಿಲ್ಲ.1950 ಕ್ಕಾದರೂ ನಮಗೆ ವಿಮೋಚನೆ ಸಿಗುತ್ತಿತ್ತು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!