Thursday, June 25, 2026
Homeಅಪರಾಧಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಮೂವರು ಅಧಿಕಾರಿಗಳ ಅಮಾನತು

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಮೂವರು ಅಧಿಕಾರಿಗಳ ಅಮಾನತು

- Advertisement -
- Advertisement -

ಪಣಜಿ: ಗೋವಾದ ಅರ್ಪೋರಾ ನೈಟ್‌ಕ್ಲಬ್ ನಲ್ಲಿ ನಡೆದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಗೋವಾ ಸರ್ಕಾರ ಆದೇಶಿಸಿದೆ.

ಅಗ್ನಿ ದುರಂತದಲ್ಲಿ 25 ಮಂದಿ ಸಜೀವವಾಗಿ ದಹನವಾಗಿದ್ದಾರೆ.

ಸರ್ಕಾರದ ಆದೇಶದಲ್ಲಿ, ಅಗತ್ಯ ಸುರಕ್ಷತಾ ದಾಖಲೆಗಳಿಲ್ಲದಿದ್ದರೂ ಕೂಡ ನೈಟ್ ಕ್ಲಬ್‌ಗೆ ಮೂವರು ಅಧಿಕಾರಿಗಳು 2023ರಲ್ಲಿಅನುಮತಿ ನೀಡಿದ್ದರು. ಈ ನಿಟ್ಟಿನಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಶಮಿಲಾ ಮಾಂಟೆರೋ, ಪಂಚಾಯತಿಗಳ ನಿರ್ದೇಶಕಿ ಸಿದ್ಧಿ ಹಲರ್ನ್ಕರ್ ಮತ್ತು ಹಡ್‌ಫಡೆ-ನಾಗ್ವಾ ಪಂಚಾಯತ್ ಕಾರ್ಯದರ್ಶಿ ರಘುವೀರ್ ಬಗ್ಕರ್ ಮೂವರನ್ನು ಅಮಾನತುಗೊಳಿಸಿದೆ ಎಂದು ತಿಳಿದು ಬಂದಿದೆ.

ಇನ್ನು ಇದಕ್ಕೂ ಮುನ್ನ ಕ್ಲಬ್‌ನ ನಾಲ್ವರು ಸಿಬ್ಬಂದಿಯಾದ ಮುಖ್ಯ ಜನರಲ್ ಮ್ಯಾನೇಜರ್ ರಾಜೀವ್ ಮೋಡಕ್, ಮ್ಯಾನೇಜರ್ ವಿವೇಕ್ ಸಿಂಗ್, ಉದ್ಯೋಗಿಗಳಾದ ರಾಜೀವ್ ಸಿಂಘಾನಿಯಾ, ಪ್ರಿಯಾಂಶು ಠಾಕೂರ್‌ನ್ನು ಅರೆಸ್ಟ್ ಮಾಡಲಾಗಿತ್ತು. ಇನ್ನೂ ಮಾಲೀಕರಾದ ಗೌರವ್ ಮತ್ತು ಸೌರಭ್ ಲುತ್ರಾ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದ್ದು, ದೆಹಲಿಯಲ್ಲಿ ಗೋವಾ ಪೊಲೀಸರು ಪತ್ತೆಹಚ್ಚುವಲ್ಲಿ ಕಾರ್ಯನಿರತರಾಗಿದ್ದಾರೆ. ಸ್ಥಳೀಯ ಸರಪಂಚ್ ರೋಷನ್ ರೆಡ್ಕರ್‌ನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ.

- Advertisement -

Latest News

error: Content is protected !!