Tuesday, May 14, 2024
Homeತಾಜಾ ಸುದ್ದಿಗೋವಾ ರಾಜ್ಯಾದ್ಯಂತ ಕಟ್ಟೆಚ್ಚರ; ಅವ್ಯವಹಾರ, ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಬಿಗಿ ಬಂದೋಬಸ್ತ್

ಗೋವಾ ರಾಜ್ಯಾದ್ಯಂತ ಕಟ್ಟೆಚ್ಚರ; ಅವ್ಯವಹಾರ, ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಬಿಗಿ ಬಂದೋಬಸ್ತ್

spot_img
- Advertisement -
- Advertisement -

ಪಣಜಿ: ಲೋಕಸಭೆ ಚುನಾವಣೆ ಹಿನ್ನಲೆ ಗೋವಾ ರಾಜ್ಯಾದ್ಯಂತ ಅಧಿಕ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಲೋಕಸಭೆ ಚುನಾವಣೆ ವೇಳೆ ನಡೆಯುವ ಅವ್ಯವಹಾರ ಹಾಗೂ ಇತರ ಅಕ್ರಮ ಚಟುವಟಿಕೆಗಳನ್ನು ತಡೆಯಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದ್ದು, ಭದ್ರತಾ ವ್ಯವಸ್ಥೆಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.

ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳೊಂದಿಗೆ ಸರ್ಕಾರಿ ಇಲಾಖೆಗಳ ನೌಕರರನ್ನು ವಿಶೇಷವಾಗಿ ನೇಮಿಸಲಾಗಿದೆ. ಗೋವಾದ ಬಿಚೋಲಿ ನಗರದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದ ಬಳಿ ತಾತ್ಕಾಲಿಕ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದ್ದು, ಈ ಸ್ಥಳದಲ್ಲೂ ಹಗಲು-ರಾತ್ರಿ ವಾಹನ ತಪಾಸಣೆ ನಡೆಸಲಾಗುತ್ತಿದೆ.

ಇಲ್ಲಿನ ದೊಡಾಮಾರ್ಗ್‍ನಲ್ಲಿ ಭದ್ರತಾ ವ್ಯವಸ್ಥೆಯಿಂದ ಹಗಲು ರಾತ್ರಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗುವ ಮತ್ತು ಮಹಾರಾಷ್ಟ್ರದಿಂದ ಗೋವಾಕ್ಕೆ ಬರುವ ವಾಹನಗಳನ್ನು ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ. ವಾಹನಗಳಲ್ಲಿ ಮದ್ಯ ಅಥವಾ ಇತರೆ ಅನುಮಾನಾಸ್ಪದ ವಸ್ತುಗಳು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ವಾಹನಗಳನ್ನು ಬಿಡಲಾಗುತ್ತಿದೆ.

- Advertisement -
spot_img

Latest News

error: Content is protected !!