Sunday, May 12, 2024
Homeಪ್ರಮುಖ-ಸುದ್ದಿರಾಜ್ಯದಾದ್ಯಂತ ಬಾಂಬೆ ಮಿಠಾಯಿ ಹಾಗೂ ಗೋಬಿ ನಿಷೇಧ; ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆ

ರಾಜ್ಯದಾದ್ಯಂತ ಬಾಂಬೆ ಮಿಠಾಯಿ ಹಾಗೂ ಗೋಬಿ ನಿಷೇಧ; ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು:ತಮಿಳುನಾಡು, ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ಬಾಂಬೆ ಮಿಠಾಯಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌  ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು  ವಿವಿಧ ಕಡೆಗಳಲ್ಲಿ ಗೋಬಿ ಹಾಗೂ ಬಾಂಬೆ ಮಿಠಾಯಿ ಈ ಎರಡು ಪದಾರ್ಥಗಳಲ್ಲಿ ನ ಸ್ಯಾಂಪಲ್‌ಗಳನ್ನು ಸಂಗ್ರಹಿಸ ಮಾಡಲಾಯಿತು.ಗೋಬಿ ಮಂಚೂರಿಯ 121 ಮಾದರಿಯನ್ನು ಸಂಗ್ರಹ ಮಾಡಲಾಯಿತು. ಇದಲ್ಲದೇ ಇದರಲ್ಲಿ ಎರಡು ವಿಷಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ ಅಂತ ಹೇಳಿದರು. ಇದನ್ನು ದಿನ ನಿತ್ಯ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಂಭವಿದೆ ಅಂಥ ಹೇಳಿದರು. ಇದನ್ನು ಬಳಕೆ ಮಾಡುವುದು ಕಾನೂನು ಬಾಹಿರ ಅಂಥ ಹೇಳಿದ್ದಾರೆ.

ಮಾದರಿಗಳನ್ನು ಬೇರೆ ಬೇರೆ ಕಡೆ ಸಂಗ್ರಹಿಸಲಾಗಿತ್ತು. 171 ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಕೃತಕ ಬಣ್ಣಗಳ ಅಸುರಕ್ಷಿತ ಮಾದರಿಯನ್ನು ಪತ್ತೆ ಹಚ್ಚಿರೋದು 107 ಇದೆ. ಸೋ ಗೋಬಿ ಮಂಚೂರಿನೂ ಮಾಡಿದ್ದೇವೆ, ಕ್ಯಾಂಡಿಯನ್ನೂ ಮಾಡಿದ್ದೇವೆ ಎಂದರು.

ಒಂದು ರೋಡಮೈನ್ ಬೀ, ಇನ್ನೊಂದು ಟಾಟ್ರಾಸೈನ್ ಅಂತ ಅದು ಇವತ್ತು ನಾವು ಈ ಒಂದು ಪದಾರ್ಥಗಳಲ್ಲಿ, ನಮ್ಮ ಸ್ಯಾಂಪಲ್ಲಿನಲ್ಲಿ ಸಿಕ್ಕಿದೆ. ಇದು ನಮ್ಮ ಉಪಯೋಗಕ್ಕೆ ಅನ್ ಸೇಫ್. ರೋಡಮೈನ್ ಬೀ ಕ್ಯಾನ್ಸರ್ ಗೆ ಬರೋದಕ್ಕೆ ಒಂದು ರೀತಿ ಕಾರಣವಾಗುತ್ತದೆ. ಈ ಕೆಮಿಕಲ್ ಅವಕಾಶ ಮಾಡಿಕೊಡುತ್ತದೆ. ವಿಶೇಷವಾಗಿ ಈ ಬಣ್ಣವನ್ನು ಯೂಸ್ ಮಾಡುವ ಹಾಗೋ ಇಲ್ಲ. ಯಾವ ಪದಾರ್ಥಗಳಲ್ಲೂ ಯೂಸ್ ಮಾಡೋ ಹಾಗೇ ಇಲ್ಲ. ಹಾಗಿದ್ದರೂ ಅದನ್ನು ಸ್ಯಾಂಪಲ್ ಗಳಲ್ಲಿ ಪರೀಕ್ಷೆಯಲ್ಲಿ ಬಳಕೆ ಮಾಡಿರೋದು ಕಂಡು ಬಂದಿದೆ ಎಂದರು.

ಯಾಕೆ ರೋಡಮೈನ್ ಬೀ ಬಳಕೆ ಮಾಡುತ್ತಾರೆ ಅಂದರೇ ಪಿಂಕ್ ಕಲರ್ ಬರೋದಕ್ಕೆ ಬಳಕೆ ಮಾಡುತ್ತಾರೆ. ಈಗ ನಮ್ಮ ಆರೋಗ್ಯ ಇಲಾಖೆಯ ಆಯುಕ್ತರು ಕೂಡ ಸುತ್ತೋಲೆ ಹೊರಡಿಸುತ್ತಾರೆ. ಅದನ್ನು ಬಳಕೆ ಮಾಡುವಂತಿಲ್ಲ. ಬಳಕೆ ಮಾಡಿದ್ರೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಗೋಬಿ ಮಂಚೂರಿ ಇದೊಂದು ಪುಡ್ ಐಟಂ. ಟಾಟ್ರಾಸೈನ್ ಏನಿದೆ ಅದು ಅಪ್ರೂವ್ಡ್ ಆರ್ಟಿಫಿಷಲ್ ಪುಡ್ ಕಲ್ಲರ್. ಕೆಮಿಕಲ್ ಬಳಕೆ ಮಾಡದಂತ ಗೋಬಿಮಂಚೂರಿಯನ್ನು ಬಳಕೆಗೆ ಅವಕಾಶ ನೀಡಲಾಗುತ್ತದೆ. ವಿತ್ ಔಟ್ ಕಲರ್ ಬಳಕೆ ಮಾಡಿದರೆ ಕ್ಯಾಂಡಿಯನ್ನು ಬಳಕೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತದೆ. ಅದರ ಹೊರತಾಗಿ ಕಲರ್ ಬಳಕೆ ಮಾಡುವಂತ ಗೋಬಿಮಂಚೂರಿ, ಕ್ಯಾಂಡಿ ನಿಷೇಧ ಮಾಡಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದರು.

- Advertisement -
spot_img

Latest News

error: Content is protected !!