Sunday, April 28, 2024
Homeತಾಜಾ ಸುದ್ದಿಗೋಬಿ ಮಂಚೂರಿ ಪ್ರಿಯರಿಗೆ ಶಾಕಿಂಗ್ ಸುದ್ದಿ: ಶೀಘ್ರದಲ್ಲೇ ರಾಜ್ಯದಲ್ಲಿ ಗೋಬಿ ಬ್ಯಾನ್ ಆಗುವ ಸಾಧ್ಯತೆ

ಗೋಬಿ ಮಂಚೂರಿ ಪ್ರಿಯರಿಗೆ ಶಾಕಿಂಗ್ ಸುದ್ದಿ: ಶೀಘ್ರದಲ್ಲೇ ರಾಜ್ಯದಲ್ಲಿ ಗೋಬಿ ಬ್ಯಾನ್ ಆಗುವ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು: ಗೋಬಿ ಮಂಚೂರಿ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ ರಾಜ್ಯದಲ್ಲಿ ಗೋಬಿ ಬ್ಯಾನ್ ಆಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಬ್ಯಾನ್ ಮಾಡಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ವಿಷಕಾರಕ, ಕ್ಯಾನ್ಸರ್ ಕಾರಕ ಅಂಶಗಳಿರುವಂತ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡೋದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ಹೇಳಲಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಈಗಾಗಲೇ ಹಾನಿಕಾರ ಅಂಶವಿರುವಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯಯ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿ, ಪರೀಕ್ಷಾ ವರದಿಯನ್ನು ಪಡೆದುಕೊಂಡಿದೆ. ಈ ವರದಿಯನ್ನು ಆಧರಿಸಿ ಕರ್ನಾಟಕದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ಬ್ಯಾನ್ ಮಾಡೋದಾಗಿ ಹೇಳಲಾಗುತ್ತಿದೆ.

ಇನ್ನೂ ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ಸೋಮವಾರ (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆದೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

 

- Advertisement -
spot_img

Latest News

error: Content is protected !!