Wednesday, June 3, 2026
Homeಕರಾವಳಿಮಂಗಳೂರುಕಡಬ;  ಹಾಡಹಗಲೇ ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಕಳ್ಳರು

ಕಡಬ;  ಹಾಡಹಗಲೇ ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಕಳ್ಳರು

- Advertisement -
- Advertisement -

ಕಡಬ;  ಹಾಡಹಗಲೇ ಕಳ್ಳರು ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ  102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರ ನಡೆದಿದೆ.

ಬಜಕೆರೆ ನಿವಾಸಿ ಜೇಮ್ಸ್ ಎಂಬವರು ನೆಲ್ಯಾಡಿಯಲ್ಲಿ ನಡೆದ ಕಾರ್ಯಕ್ರಮಕ್ಕೆಂದು ಮನೆಗೆ ಬೀಗ ಹಾಕಿ ತೆರಳಿದ್ದರು.ಸಂಜೆ ವೇಳೆಗೆ ಮನೆ ಮಂದಿ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದನ್ನು ಕಳ್ಳರು ದೋಚಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಗ್ರಾಮಾಂತರ ಇನ್ಸ್‌ಪೆಕ್ಟರ್ ರವಿ ಬಿ.ಎಸ್., ಕಡಬ ಠಾಣಾ ಸಬ್ ಇನ್ಸ್‌ಪೆಕ್ಟ‌ರ್ ಅಭಿನಂದನ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!