Wednesday, June 3, 2026
Homeತಾಜಾ ಸುದ್ದಿಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರತ್ಯಕ್ಷವಾದ ನಾಗರ ಹಾವು!

ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರತ್ಯಕ್ಷವಾದ ನಾಗರ ಹಾವು!

- Advertisement -
- Advertisement -

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ನಾಗರ ಹಾವು ಕಾಣಿಸಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಬಸ್ಸಿನಲ್ಲಿ ನಾಗರ ಹಾವು ಕಂಡು ಪ್ರಯಾಣಿಕರು ಭೀತರಾಗಿದ್ದು,
ಚಿಕ್ಕಬಳ್ಳಾಪುರ ನಗರದಲ್ಲಿ ಬಸ್ ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ.

ಚಿಕ್ಕಬಳ್ಳಾಪುರದಿಂದ ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಹಾವು ಕಾಣಿಸಿಕೊಂಡಿದ್ದು,
ತಕ್ಷಣ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ.

ನಂತರ ಉರಗ ತಜ್ಞ ಪೃಥ್ವಿರಾಜ್ ಎಂಬವರನ್ನು ಕರೆಸಿ ಬಸ್ಸಿನ ಇಂಜಿನ್ ಬಳಿ ಸೇರಿಕೊಂಡಿದ್ದ ಹಾವು ರಕ್ಷಣೆ ಮಾಡಲಾಗಿದೆ.

- Advertisement -

Latest News

error: Content is protected !!