Thursday, June 4, 2026
Homeಕೊಡಗುಕೊಡಗು; ದೇವಸ್ಥಾನದ ಆವರಣದಲ್ಲಿ ನಿಧಿ ಪತ್ತೆ

ಕೊಡಗು; ದೇವಸ್ಥಾನದ ಆವರಣದಲ್ಲಿ ನಿಧಿ ಪತ್ತೆ

- Advertisement -
- Advertisement -

ಕೊಡಗು; ದೇವಸ್ಥಾನದ ಆವರಣದಲ್ಲಿ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಆನಂದಪುರ ಗ್ರಾಮದಲ್ಲಿ ನಡೆದಿದೆ.

ಟಾಟಾ ಕಾಫಿ ಸಂಸ್ಥೆಗೆ ಸೇರಿದ ಕಾಫಿತೋಟದಲ್ಲಿರುವ ಪುರಾತನ ಈಶ್ವರ ದೇವಸ್ಥಾನ ಆವರಣದಲ್ಲಿ ನಿಧಿ ಪತ್ತೆಯಾಗಿದೆ. ದೇವಸ್ಥಾನ ಆವರಣದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಭೂಮಿಯಡಿಯಲ್ಲಿದ್ದ ಮಣ್ಣಿನ ಮಡಿಕೆಯಲ್ಲಿ  ನಿಧಿ ಕಂಡಿದೆ. ಕೂಡಲೇ  ಟಾಟಾ ಕಾಫಿ ತೋಟದ  ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ವಿರಾಜಪೇಟೆ ತಹಶೀಲ್ದಾರ್‌ ಸಮ್ಮುಖದಲ್ಲಿ ಮಹಜರು ಮಾಡಿ ಬಳಿಕ ಕೊಡಗು ಜಿಲ್ಲಾಧಿಕಾರಿ ವಶಕ್ಕೆ ನಿಧಿ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!