Friday, June 5, 2026
Homeತಾಜಾ ಸುದ್ದಿಆಭರಣ ಪ್ರಿಯರಿಗೆ ಸಿಹಿ ಸುದ್ದಿ​, ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ​, ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

- Advertisement -
- Advertisement -

 ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬಂದಿದೆ. ಆದರೆ ಇತ್ತೀಚಿನ ಮಾರುಕಟ್ಟೆಯ ಪರಿಸ್ಥಿತಿಯನ್ನು ಅವಲೋಕಿಸಿದರೆ, ಬೆಳ್ಳಿಯ ಬೆಲೆ ಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಬೆಳ್ಳಿ ಬೆಲೆ ಮಂಗಳವಾರ 5700 ರೂ.ವರೆಗೆ ಇಳಿಕೆ ಕಂಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಲೋಹಗಳ ಬೆಲೆಯಲ್ಲಿ ಅಮೆರಿಕದ ಡಾಲರ್ ನ ಬಲ ವು ಗಣನೀಯ ಕುಸಿತ ಕಂಡಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ದೇಶೀಯ ಸರ್ಫಾ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ. ರಾಜಧಾನಿ ದೆಹಲಿಯಲ್ಲಿ ಒಂದು ಕಿಲೋಗ್ರಾಂ ಬೆಳ್ಳಿ ಬೆಲೆ 5,781 ರೂಪಾಯಿ ಇಳಿಕೆಯಾಗಿದ್ದು, ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 672 ರೂಪಾಯಿಗಳಷ್ಟು ಇಳಿಕೆಯಾಗಿದೆ. ಅಂದ ಹಾಗೇ ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಇಳಿಕೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

- Advertisement -

Latest News

error: Content is protected !!