Wednesday, June 3, 2026
Homeತಾಜಾ ಸುದ್ದಿಕೊರೊನಾ ಅಬ್ಬರದ ನಡುವೆ ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಕೊರೊನಾ ಅಬ್ಬರದ ನಡುವೆ ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

- Advertisement -
- Advertisement -

ಬೆಂಗಳೂರು :  ಕೊರೊನಾ ಆರ್ಭಟದ ಮಧ್ಯೆ ಆಭರಣ ಪ್ರಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದ್ದ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,800 ರೂ. ಗೆ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನ 4,58,000 ರೂ.ಗೆ ಕುಸಿತ ಕಂಡಿದೆ. ಬೆಳ್ಳಿ ಬೆಲೆಯಲ್ಲೂ ಸಹ ಇಂದು ಇಳಿಕೆ ಕಂಡುಬಂದಿದೆ. 1 ಕೆಜಿ ಬೆಳ್ಳಿ ದರ 71,000 ರೂ. ಆಗಿದೆ. ಚಿನ್ನ ಮತ್ತು ಬೆಳ್ಳಿ ದರ ಎರಡೂ ಆಭರಣಗಳು ಕೂಡ ಇಳಿಕೆ ಕಂಡುಬಂದಿರುವುದು ಗ್ರಾಹಕರಿಗೆ ಖುಷಿ ತಂದಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಚಿನ್ನದ ದರ ಕೊಂಚ ಏರಿಕೆಯಾಗಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,950 ರೂ. ಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 52,300 ರೂ. ಗೆ ಏರಿಕೆಯಾಗಿದೆ.

- Advertisement -

Latest News

error: Content is protected !!