Saturday, June 6, 2026
Homeತಾಜಾ ಸುದ್ದಿವಿಟ್ಲ: ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಬಂದು ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ- ಚಿನ್ನಾಭರಣ ದೋಚಿ...

ವಿಟ್ಲ: ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಬಂದು ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ- ಚಿನ್ನಾಭರಣ ದೋಚಿ ಪರಾರಿ

- Advertisement -
- Advertisement -

ವಿಟ್ಲ: ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆಕೋರರು ಮಹಿಳೆಯ ಮೇಲೆ ಕತ್ತಿಯಿಂದ ಕಡಿದು ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.

ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆಯ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ, ಮನೆಗೆ ಬಂದು ಹಿಂತಿರುಗಿದ್ದರು.

ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಬಂದು ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

- Advertisement -

Latest News

error: Content is protected !!