Friday, June 5, 2026
Homeಕರಾವಳಿಬೆಳ್ತಂಗಡಿ : ಮನೆಗೆ ಬೆಂಕಿ ಬಿದ್ದ ನೋವಿನಲ್ಲಿದ್ದವರಿಗೆ ಮತ್ತೊಂದು ಶಾಕ್ :  ಕಪಾಟಿನಲ್ಲಿದ್ದ ಲಕ್ಷಾಂತರ ರೂಪಾಯಿಯ ಚಿನ್ನಾಭರಣ...

ಬೆಳ್ತಂಗಡಿ : ಮನೆಗೆ ಬೆಂಕಿ ಬಿದ್ದ ನೋವಿನಲ್ಲಿದ್ದವರಿಗೆ ಮತ್ತೊಂದು ಶಾಕ್ :  ಕಪಾಟಿನಲ್ಲಿದ್ದ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಮಾಯ

- Advertisement -
- Advertisement -

ಬೆಳ್ತಂಗಡಿ : ಮನೆಯೊಂದಕ್ಕೆ ಬೆಂಕಿ ಬಿದ್ದ ಸಂದರ್ಭವನ್ನೇ ಲಾಭವಾಗಿಸಿಕೊಂಡ ಪಾಪಿಗಳು ಚಿನ್ನಾಭರಣ ದೋಚಿರುವ ಘಟನೆ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಮೇ 16ರಂದು ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್‌ನ ಆನಂದ ಮೂಲ್ಯ ಅವರ ಮನೆಗೆ ಬೆಂಕಿ ತಗುಲಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು. ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕ್ಯಾಮರಾದ ಪರಿಕರಗಳು ಸುಟ್ಟು ಹೋಗಿದ್ದವು,  ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್‌ ಮತ್ತು ದಾಖಲೆ ಪತ್ರಗಳು ಯಥಾಸ್ಥಿತಿಯಲ್ಲಿದ್ದವು.

ಮೇ 30ರಂದು ವಸ್ತುಗಳನ್ನು ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್‌ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!