Thursday, June 4, 2026
Homeಕರಾವಳಿಉಪ್ಪಿನಂಗಡಿ; ಭಕ್ತರೊಬ್ಬರು ದೇಗುಲಕ್ಕೆ ಅರ್ಪಿಸಿದ ಚಿನ್ನಾಭರಣ ನಾಪತ್ತೆ

ಉಪ್ಪಿನಂಗಡಿ; ಭಕ್ತರೊಬ್ಬರು ದೇಗುಲಕ್ಕೆ ಅರ್ಪಿಸಿದ ಚಿನ್ನಾಭರಣ ನಾಪತ್ತೆ

- Advertisement -
- Advertisement -

ಉಪ್ಪಿನಂಗಡಿ; ಭಕ್ತರೊಬ್ಬರು ದೇಗುಲಕ್ಕೆ ಅರ್ಪಿಸಿದ ಚಿನ್ನಾಭರಣ ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ  ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದಿದೆ.

ಕಳೆದ ಡಿಸೆಂಬರ್‌ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಆಗ ದೇವರಿಗೆ ಭಕ್ತರೊಬ್ಬರ  ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಅರ್ಪಿಸಿದ್ದರು.ಆದರೆ ಈಗ ಎರಡು ಪವನಿನ ಚಿನ್ನದ ಸರ ಹಾಗೂ ಜೋ ಮಾಲೆ ನಾಪತ್ತೆಯಾಗಿದೆ.

ಸರಕಾರ ದೇವಾಲಯಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಅಧಿಕಾರ ಸ್ವೀಕರಿಸಿದ ಅವರು ಅ.15ರಂದು ಭಕ್ತಾದಿಗಳ ಸಮ್ಮುಖದಲ್ಲಿ ಮಹಜರು ನಡೆಸಿದಾಗ ಚಿನ್ನದ ಸರಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಚಿನ್ನದ ಸರಗಳು ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿರುವ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ದೂರು ದಾಖಲಿಸಿದ್ದಾರೆ. ಚಿನ್ನಾಭರಣ ಕಳ್ಳತನವಾಗಲು ಭದ್ರತಾ ಕೊಠಡಿಯ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!