- Advertisement -
- Advertisement -
ಉಡುಪಿ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೈಂದೂರು ಗ್ರಾಮದ ಮಯ್ಯಾ ಎಂಬಲ್ಲಿ ನಡೆದಿದೆ.
ಬೆಂಗಳೂರಿನಲ್ಲಿರುವ ಸುಬ್ರಹ್ಮಣ್ಯ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕ್ ಮುರಿದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ಎರಡು ಚಿನ್ನದ ಬಳೆ, ಒಂದು ಚಿನ್ನದ ಉಂಗುರ, ಒಂದು ಜೊತೆ ಚಿನ್ನದ ಓಲೆ ಹಾಗೂ ಒಂದು ಬೆಳ್ಳಿಯ ದೀಪಗಳನ್ನು ಕಳವು ಮಾಡಿದ್ದಾರೆ.
ಕಳವಾದ ಸೊತ್ತುಗಳ ಒಟ್ಟು ಮೌಲ್ಯ 1,00,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -