Saturday, June 6, 2026
Homeಕರಾವಳಿಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು

- Advertisement -
- Advertisement -

ಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಿಥುನ್ ಕುಮಾರ್ ಎಂಬವರ ಮನೆಯ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದೊಯ್ದಿದ್ದಾರೆ. ಮಿಥುನ್ ಕುಮಾರ್ ಮತ್ತವರ ಪತ್ನಿ ವಸುಮತಿ ಎಂದಿನಿಂತೆ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಿದ್ದರು.ವಸುಮತಿ ಅವರು ಮಧ್ಯಾಹ್ನ 1ಕ್ಕೆ ಊಟ ಮಾಡಲು ಮನೆಗೆ ಬಂದಾಗ ಎದುರಿನ  ಬಾಗಿಲಿಗೆ ಹಾಕಿದ ಬೀಗವನ್ನು ಯಾರೋ ಕಳ್ಳರು ಮುರಿದು ಒಳಗೆ ಪ್ರವೇಶಿಸಿ 8 ಗ್ರಾಂ ತೂಕದ 1 ರೋಪ್ ಚೈನ್, ಮೂರು ಚಿನ್ನದ ಉಂಗುರಗಳನ್ನು ಕದ್ದಿರೋದು ಗೊತ್ತಾಗಿದೆ. ಈ ಬಗ್ಗೆ ಅವರು ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!