Thursday, June 4, 2026
Homeಕರಾವಳಿಉಡುಪಿಉಡುಪಿ; ಮನೆಯಿಂದ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವು

ಉಡುಪಿ; ಮನೆಯಿಂದ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವು

- Advertisement -
- Advertisement -

ಉಡುಪಿ: ಮನೆಯಿಂದ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವವಾಗಿರುವ ಘಟನೆ ಮಣಿಪಾಲದ ಬಡಗಬೆಟ್ಟು ಗ್ರಾಮದ ಇಂದಿರಾ ನಗರದಲ್ಲಿ ನಡೆದಿದೆ. ಇಲ್ಲಿನ ಮನೆಯೊಂದಕ್ಕೆ ಎ.7 ರಂದು ಬೆಳಗ್ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ.

ಮನೆಗೆ ನುಗ್ಗಿದ ಕಳ್ಳರು ಕಾಪಾಟಿನಲ್ಲಿದ್ದ 44 ಗ್ರಾಂ ತೂಕದ ಚಿನ್ನದ ಕಡಗ, ಎರಡು ಚಿನ್ನದ ಸರಗಳನ್ನು ಕದ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕದ್ದ ಚಿನ್ನಾಭರಣಗಳ ಒಟ್ಟು ಮೌಲ್ಯ 3,30,000ರೂ. ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!