Thursday, June 4, 2026
Homeಅಪರಾಧಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಪತ್ತೆ !

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಪತ್ತೆ !

- Advertisement -
- Advertisement -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಅಕ್ರಮ ಚಿನ್ನ ಪತ್ತೆಯಾಗಿದೆ. ದುಬೈನಿಂದ ಬಂದ ಪ್ರಯಾಣಿಕನಿಂದ 34. 32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ಈ ಯುವಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದವನು ಎಂದು ತಿಳಿದು ಬಂದಿದೆ. ಪ್ರಯಾಣಿಕನ ಬಳಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 34, 32, 240 ರೂಪಾಯಿ ಮೌಲ್ಯದ 681 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!