Tuesday, June 6, 2023
Homeತಾಜಾ ಸುದ್ದಿಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ‌ ವಶ

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ‌ ವಶ

- Advertisement -
- Advertisement -

ಚಿಕ್ಕಮಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ‌ವನ್ನು ಚಿಕ್ಕಮಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಕಪ್ ವಾಹನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ‌ ಸಾಗಿಸುತ್ತಿದ್ದು, ತರೀಕೆರೆ ಪಟ್ಟಣದ ಪೊಲೀಸ್‌ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ‌ಮಾಡುವಾಗ ಪತ್ತೆಯಾಗಿದೆ.

ಚಿಕ್ಕಮಗಳೂರು ಎಸ್ಪಿ‌ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದ್ದು,  2 ಕೋಟಿ 30‌ ಲಕ್ಷ‌‌ ಬೆಲೆ ಬಾಳುವ 9 ಕೆ.ಜಿ‌. 300 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಪಿಕಪ್ ವಾಹನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನದ ಸರ, ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ. ನಾಲ್ಕು ಬಾಕ್ಸ್ ನಲ್ಲಿ‌ ಚಿನ್ನವನ್ನ‌ ಪಿಕಪ್ ವಾಹನದಲ್ಲಿ‌ ಇಬ್ಬರು ಸಾಗಿಸುತ್ತಿದ್ದರು. ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನ ವಶಕ್ಕೆ ಪಡೆದು ಎಸ್ಪಿ ಮಾಹಿತಿ ಸಂಗ್ರಹಿಸಿದ್ದಾರೆ.

- Advertisement -

Latest News

error: Content is protected !!