Friday, May 3, 2024
Homeಕರಾವಳಿಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

spot_img
- Advertisement -
- Advertisement -

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಒಂದು ಕೋಟಿಯ 8 ಲಕ್ಷದ 28 ಸಾವಿರದ ಇನ್ನೂರು ನಲುವತ್ತು ರೂಪಾಯಿ ಮೌಲ್ಯದ  ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪತ್ತೆ ಮಾಡಲಾಗಿದೆ.ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್‌ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಕ್ರಮ ಸಾಗಾಟದ ಚಿನ್ನ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!