Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ, ಪಿಎಸ್‌ಐ ಬಂಧನ

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ, ಪಿಎಸ್‌ಐ ಬಂಧನ

- Advertisement -
- Advertisement -

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್ ಪೆಕ್ಟರ್ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಮಹಿಳೆಯೊಬ್ಬರಿಗೆ ಕರೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುವಕನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದು, ಅಸ್ವಸ್ಥ ಯುವಕ ಕುಡಿಯುವ ನೀರು ಕೇಳಿದಾಗ, ವ್ಯಕ್ತಿಯೊಬ್ಬನಿಂದ ಯುವಕನ ಬಾಯಿಗೆ ಮೂತ್ರ ಬಿಡಿಸಿದ್ದಲ್ಲದೇ ನೆಲದ ಮೇಲೆ ಬಿದ್ದಿದ್ದ ಮೂತ್ರವನ್ನು ಕೂಡ ನೆಕ್ಕಿಸಲಾಗಿತ್ತು ಎಂದು ಮೂಡಿಗೆರೆ ತಾಲ್ಲೂಕಿನ ಯುವಕ ಗೋಣಿಬೀಡು ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಎಸ್ಪಿ ರವಿ ಚನ್ನಣ್ಣನವರ್ ನೇತೃತ್ವದ ತನಿಖಾ ತಂಡ ಆರೋಪಿಯನ್ನು ಬಂಧಿಸಿದೆ. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನು ಕೋರಿ ಚಿಕ್ಕಮಗಳೂರು ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜುನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿತ್ತು.

- Advertisement -

Latest News

error: Content is protected !!