Friday, May 3, 2024
Homeತಾಜಾ ಸುದ್ದಿನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ, ಹರ ತುರಾಯಿ ಸ್ವೀಕರಿಸಲ್ಲ; ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ...

ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ, ಹರ ತುರಾಯಿ ಸ್ವೀಕರಿಸಲ್ಲ; ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಡೆಯನ್ನೇ ಅನುಸರಿಸಿದ ಸಿಎಂ ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತ ಮರು ದಿನವೇ, ಸಿದ್ಧರಾಮಯ್ಯ ತಮಗೆ ಸಾರ್ವಜನಿಕರಿಗೆ ತೊಂದರೆ ಆಗುವಂತ ಜೀರೋ ಟ್ರಾಫಿಕ್ ಸೌಲಭ್ಯ ಬೇಡ.ಅದನ್ನು ವಾಪಾಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ಇದಷ್ಟೇ ಅಲ್ಲದೇ ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂಬುದಾಗಿ ಮನವಿ ಮಾಡಿದ್ದಾರೆ.  ಈ ಹಿಂದೆ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿ ಅವರು ಕೂಡ ಇದೇ ರೀತಿಯ ನಿರ್ಧಾರ ಕೈಗೊಂಡಿದ್ದರು. ಅವರ ನಡೆಗೂ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತು. ಇದೀಗ ಸಿದ್ದರಾಮ್ಯಯ ಅವರ ನಿರ್ಧಾರಕ್ಕೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!