Saturday, June 6, 2026
Homeತಾಜಾ ಸುದ್ದಿ`ಅಕ್ರಮ-ಸಕ್ರಮ' ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

`ಅಕ್ರಮ-ಸಕ್ರಮ’ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

- Advertisement -
- Advertisement -

ಬೆಂಗಳೂರು : ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ನಗರಾಭಿವೃದ್ಧಿ, ಪೌರಾಡಳಿತ ಸಂಸ್ಥೆಗಳಿಗೆ ಸೇರಿದ ನಿವೇಶನದಲ್ಲಿ ಕಟ್ಟಲಾಗಿರುವ ಕಟ್ಟಡಗಳನ್ನು ಒಂದು ತಿಂಗಳೊಳಗಾಗಿ ಸಕ್ರಮಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ಏಕ ನಿವೇಶನ ನೋಂದಣಿ, ಕಟ್ಟಡ ಪರವಾನಿಗೆ, ಕನ್ವರ್ಷನ್, ಖಾತೆ ಬದಲಾವಣೆ ಮೊದಲಾದ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸಚಿವರಿಗೆ ಮನವಿ ಮಾಡಿದ್ದು ಇದಕ್ಕೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಒಂದು ತಿಂಗಳ ಒಳಗೆ ನಗರಾಭಿವೃದ್ಧಿ ಸಂಸ್ಥೆ, ಪೌರಾಡಳಿತ ಸಂಸ್ಥೆಗೆ ಸೇರಿದ ನಿವೇಶನದಲ್ಲಿ ನಿರ್ಮಿಸಲಾದ ಕಟ್ಟಡಗಳ ಸಕ್ರಮಕ್ಕೆ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!