Thursday, May 2, 2024
Homeತಾಜಾ ಸುದ್ದಿರಾಜ್ಯದ 6 - 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಮಧ್ಯಾಹ್ನದ ಬಿಸಿಯೂಟ ಆರಂಭಿಸಲು...

ರಾಜ್ಯದ 6 – 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಮಧ್ಯಾಹ್ನದ ಬಿಸಿಯೂಟ ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

spot_img
- Advertisement -
- Advertisement -

ಬೆಂಗಳೂರು : ರಾಜ್ಯದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಸಿಹಿಸುದ್ದಿಯೊಂದನ್ನು ನೀಡಿದೆ., ಏಪ್ರಿಲ್ 15 ರಿಂದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಕಾರಣಕ್ಕೆ ಕಳೆದ 9 ತಿಂಗಳಿಗೂ ಹೆಚ್ಚು ಕಾಲದಿಂದ ಬಂದ್ ಆಗಿದ್ದ ಶಾಲೆಗಳು ಹಂತ ಹಂತವಾಗಿ ಆರಂಭವಾಗುತ್ತಿದ್ದು, ಈಗಾಗಲೇ 6 ರಿಂದ 10 ನೇ ತರಗತಿ ಶಾಲೆಗಳು ಆರಂಭವಾಗಿದ್ದು, 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ಕೋರಿ ರಾಧ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ರಾಧ ಅವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 15 ರಿಂದ ಬಿಸಿಯೂಟ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

- Advertisement -
spot_img

Latest News

error: Content is protected !!