- Advertisement -
- Advertisement -
ಬೆಂಗಳೂರು: ಯಾರಿಗೆ ಕೊರೋನಾ ಸೋಂಕು ತಗುಲಿದ ಶಂಕೆ ಇದೆಯೋ ಅವರನ್ನು ಪ್ರತ್ಯೇಕ ಮಾಡಲಾಗಿದೆ. ರಾಜ್ಯದಲ್ಲಿ ಲಾಕ್ ಡೌನ್ ಪರಿಣಾಮಕಾರಿ ಅನುಷ್ಠಾನದ ಕುರಿತಾಗಿ ಚರ್ಚೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಅಗತ್ಯ ಸರಕು ಮತ್ತು ಸೇವೆಗಳ ಪೂರೈಕೆಗೆ ಕ್ರಮ ವಹಿಸಲಾಗಿದೆ. ಬಿಪಿಎಲ್ ಕಾರ್ಡುದಾರರಿಗೆ ಮನೆ ಬಾಗಿಲಿಗೆ ಪಡಿತರ ಪೂರೈಸಲಾಗುವುದು. ಜನರು ತಮ್ಮ ಪ್ರದೇಶದಲ್ಲಿಯೇ ಅಗತ್ಯ ವಸ್ತುಗಳನ್ನು ಖರೀದಿಸಬೇಕು ಎಂದು ಸಿಎಂ ಆದೇಶಿಸಿದ್ದಾರೆ.
ಅಗತ್ಯ ಸೇವೆಗಳಿಗೆ ಮಾತ್ರ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಜನರು ತಮ್ಮ ಜೀವ ರಕ್ಷಣೆ ಮಾಡಿಕೊಳ್ಳುವ ವಿಚಾರದಲ್ಲಿ ಜವಾಬ್ದಾರಿಯಿಂದ ಇರಬೇಕು ಎಂದು ಹೇಳಿದ್ದಾರೆ.
- Advertisement -