Saturday, May 18, 2024
Homeಪ್ರಮುಖ-ಸುದ್ದಿಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು, ಏನದು?

ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು, ಏನದು?

spot_img
- Advertisement -
- Advertisement -

ಬೆಂಗಳೂರು : ಕೊರೊನಾ ಸಂಕಷ್ಟದ ವೇಳೆ ರಾಜ್ಯದ ಶಾಲಾ ಮುಖ್ಯ ಶಿಕ್ಷಕರಿಗೆ ಕೊರೊನಾ ಕರ್ತವ್ಯ ಸೇವೆಯಿಂದ ರಿಲೀಫ್ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರನ್ನು ತುರ್ತು ಸೇವೆಗೆ ಬಳಸಿಕೊಳ್ಳಲಾಗುತ್ತಿದ್ದು, ಸದ್ಯ ಶಾಲಾ ಮುಖ್ಯೋಪಾಧ್ಯಾಯರನ್ನು ಸೇವೆಯಿಂದ ಮುಕ್ತಗೊಳಿಸಲು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರು ಕೊರೊನಾ ಜವಾಬ್ದಾರಿಯಿಂದ ಮುಕ್ತರಾಗಿ ಶಾಲಾ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಮುಖ್ಯ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದರೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ, ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರೆಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮನ ಅನುಷ್ಠಾನ ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ಯೋಜನೆಗಳು ಸಮರ್ಪಕವಾಗಿ ನಡೆಬೇಕಾದರೆ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಅವಶ್ಯಕತೆ ಹಚ್ಚು ಇರುತ್ತದೆ , ಆದ್ದರಿಂದ ಶಾಲಾ ಮುಖ್ಯೋಪಾಧ್ಯಾಯರನ್ನು ಸೇವೆಯಿಂದ ಮುಕ್ತಗೊಳಿಸಲು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!